"ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ"
------------------------------------------------------------------------------
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 07, (ಕರ್ನಾಟಕ ವಾರ್ತೆ):- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಆರ್ಯ ವೈಶ್ಯ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಯೊಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಸಿ.ಇ.ಟಿ./ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1,00,000 ರೂ.ಗಳ ಸಾಲವನ್ನು ಶೇ.02 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.
ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6,00,000 ರೂ.ಗಳ ಮಿತಿಯೊಳಗಿರಬೇಕು.
ಅರ್ಜಿಗಳನ್ನು ಆನ್ಲೈನ್ kacdc.karnataka.gov.in ಮೂಲಕ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ. 9448451111 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DIPR Bengaluru Rural
Contact information, map and directions, contact form, opening hours, services, ratings, photos, videos and announcements from DIPR Bengaluru Rural, Government Official, No 17, Vartha Soudha, Bhagawan Mahaveer Road (Infantry Road), Bangalore.
"ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ"
------------------------------------------------------------------------------
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್ 07, 2024(ಕರ್ನಾಟಕ ವಾರ್ತೆ):- ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 05 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 01 ಲಕ್ಷ ರೂಗಳ ದಂಡ ವಿಧಿಸಲಾಗುವುದು.
ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 03 ವರ್ಷಗಳಿಗೆ ಕಡಿಮೆ ಇಲ್ಲದಂತೆ 07 ವರ್ಷಗಳವರೆಗೆ ವಿಸ್ತರಣೆ' ಮಾಡಬಹುದಾಗಿದೆ.
ಈ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅನಾಥ ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂಖ್ಯೆ: 080-29560034 ನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
07/11/2024
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 07, 2024 (ಕರ್ನಾಟಕ ವಾರ್ತೆ):- "ವಿವಿಧ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ" ಈ ಕುರಿತು ಪತ್ರಿಕಾ ವರದಿಗಳು
07/11/2024
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 07, 2024 (ಕರ್ನಾಟಕ ವಾರ್ತೆ):- "ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ" ಈ ಕುರಿತು ಪತ್ರಿಕಾ ವರದಿಗಳು
07/11/2024
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 07, 2024 (ಕರ್ನಾಟಕ ವಾರ್ತೆ):- "ರಾಗಿ ಕಟಾವು ಯಂತ್ರದ ಬಾಡಿಗೆ ನಿಗದಿಗಿಂತ ಹೆಚ್ಚು ಪಡೆದರೆ ಕ್ರಮ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ" ಈ ಕುರಿತು ಪತ್ರಿಕಾ ವರದಿಗಳು
07/11/2024
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 07, 2024 (ಕರ್ನಾಟಕ ವಾರ್ತೆ):- "ಇ-ಶ್ರಮ್ ಯೋಜನೆಯ ಜಾಗೃತಿಯ ಪ್ರಚಾರ ವಾಹನಕ್ಕೆ ಚಾಲನೆ" ಈ ಕುರಿತು ಪತ್ರಿಕಾ ವರದಿಗಳು
07/11/2024
"ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ"
------------------------------------------------------------------------------
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 06, (ಕರ್ನಾಟಕ ವಾರ್ತೆ):- 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ ಪಂಡಿತ್ ಅವರು ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ "ಪ್ಯಾನ್-ಇಂಡಿಯಾ ರೆಸ್ಕ್ಯೂ ಆಂಡ್ ರಿಯಾಬಿಲೇಷನ್ ಕ್ಯಾಂಪೇನ್ ಪ್ರೊಗ್ರಾಮ್ - ಎ ಸ್ಟೆಪ್ ಟು ಎರ್ರ್ಯಾಡಿಕೇಟ್ ಚೈಲ್ಡ್ ಲೇಬರ್" ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಪ್ರಚಾರ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಎಸ್.ಎಲ್, ಇತರೆ ಅಧಿಕಾರಿಗಳು ಹಾಜರಿದ್ದರು.
"ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ"
------------------------------------------------------------------------------
ಬೆಂಗಳೂರು ಗ್ರಾ, ನವೆಂಬರ್ 05, (ಕರ್ನಾಟಕ ವಾರ್ತೆ):- ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.
ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ *ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು* ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
06/11/2024
"ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ"
------------------------------------------------------------------------------
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 06, (ಕರ್ನಾಟಕ ವಾರ್ತೆ): 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ ಪಂಡಿತ್ ಅವರು ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ "ಪ್ಯಾನ್-ಇಂಡಿಯಾ ರೆಸ್ಕ್ಯೂ ಆಂಡ್ ರಿಯಾಬಿಲೇಷನ್ ಕ್ಯಾಂಪೇನ್ ಪ್ರೊಗ್ರಾಮ್ - ಎ ಸ್ಟೆಪ್ ಟು ಎರ್ರ್ಯಾಡಿಕೇಟ್ ಚೈಲ್ಡ್ ಲೇಬರ್" ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಪ್ರಚಾರ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಎಸ್.ಎಲ್, ಇತರೆ ಅಧಿಕಾರಿಗಳು ಹಾಜರಿದ್ದರು.
"ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ"
------------------------------------------------------------------------------
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್ 06, 2024(ಕರ್ನಾಟಕ ವಾರ್ತೆ): ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂಗಳಿಂದ 4000 ರೂಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 3350 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
06/11/2024
"ಅನಧಿಕೃತ ಲಾಟರಿ-ಮಟ್ಕಾ ಮಾರಾಟ ನಿಷೇಧ"
"ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್"
ಬೆಂ.ಗ್ರಾ.ಜಿಲ್ಲೆ, ನ.06(ಕರ್ನಾಟಕ ವಾರ್ತೆ):- ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ/ ಮಟ್ಕಾ ಹಾವಳಿಯ ನಿಯಂತ್ರಣದ ಬಗ್ಗೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅನಧಿಕೃತವಾಗಿ ನಡೆಸುವ ಲಾಟರಿ ಹಾಗೂ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ರಾಜ್ಯದಾದ್ಯಂತ ನಿಷೇಧಿಸಿದೆ. ಅನಧಿಕೃತವಾಗಿ ಲಾಟರಿ- ಮಟ್ಕಾ ದಂಧೆಯನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. 2024 ನೇ ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಮಟ್ಕಾ ಹಾವಳಿಯ ಒಂದು ಪ್ರಕರಣ ಕಂಡುಬಂದಿತ್ತು. ಅಕ್ರಮವಾಗಿ ಮಟ್ಕಾ ಜೂಜಾಟಕ್ಕೆ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹೇಳಿದರು.
ಸಾರ್ವಜನಿಕರಿಗೆ ಲಾಟರಿ- ಮಟ್ಕಾ ಹಾವಳಿ ಬಗ್ಗೆ ಅರಿವು ಮೂಡಿಸಿ, ಹಿಂದಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಆಗಿಂದಾಗ್ಗೆ ಗಸ್ತು ಹೋಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಲಾಟರಿ ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಪೋಲಿಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ನಾಗೇಶ್, ಪಿಂಚಣಿ , ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತ ಪ್ರಿಯದರ್ಶಿನಿ ಹಾಗು ಮುರಳಿ ಮೋಹನ್ ಉಪಸ್ಥಿತರಿದ್ದರು.
"ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ವಿಕಲಚೇತನರಿಂದ ಅರ್ಜಿ ಆಹ್ವಾನ"
------------------------------------------------------------------------------
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್ 06, 2024(ಕರ್ನಾಟಕ ವಾರ್ತೆ):- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 03 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ 50,000 ರೂಗಳನ್ನು ಹೂಡಿಕೆಯ ರೂಪದಲ್ಲಿನ ವಿವಾಹ ಪ್ರೋತ್ಸಾಹಧನ ಯೋಜನೆ, ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ” ಆರೋಗ್ಯ ವಿಮಾ ಯೋಜನೆಗಳ ಸೌಲಭ್ಯ ಪಡೆಯಬಹುದಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ ತಾಲ್ಲೂಕು ಪಂಚಾಯತಿಯಲ್ಲಿರುವ ಎಂ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಗಳಿಂದ ನಿಗಧಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಇದೇ ನವ್ಹೆಂಬರ್ 20 ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳನ್ನು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ-03 ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ: 080-29787441 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click here to claim your Sponsored Listing.
Location
Category
Contact the business
Telephone
Website
Address
No 17, Vartha Soudha, Bhagawan Mahaveer Road (Infantry Road)
Bangalore
560001
