ನಮ್ಮ ವಿದ್ಯಾರ್ಹತೆಗೆ ತಕ್ಕಂತ ಕೆಲಸಗಳು ಈ ಉದ್ಯೋಗ ಮೇಳದಿಂದ ಸಿಗುತ್ತವೆ.
Karnataka Skill Development Corporation
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧಿಕೃತ ಫೇಸ್ಬುಕ್ ಖಾತೆ. Official page of Karnataka Skill Development Corporation(KSDC)
28/05/2026
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
ನೇರ ಸಂದರ್ಶನ ಇರುವುದರಿಂದ ಇಂತಹ ಉದ್ಯೋಗ ಮೇಳಗಳಿಂದ ತುಂಬಾ ಸಹಾಯವಾಗುತ್ತದೆ.
ನಾವು ಸಂದರ್ಶನಕ್ಕೆ ಹೋಗಬೇಕಾದರೆ ಹತ್ತಾರು ಕಂಪನಿಗಳಿಗೆ ಅಲೆಯಬೇಕು. ಆದರೆ ಇಲ್ಲಿ ಹಾಗಲ್ಲ, ಒಂದೇ ಸೂರಿನಡಿ ಹತ್ತಾರು ಕಂಪನಿಗಳು ಲಭ್ಯವಿರುತ್ತವೆ.
22/05/2026
ಇಂದು ವಿಕಾಸಸೌಧದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (KVTSDC) ಹಾಗೂ ಅಂತಾರಾಷ್ಟ್ರೀಯ ವಲಸೆ ಕೇಂದ್ರ (IMC-K) ವತಿಯಿಂದ ಸಭೆ ಜರುಗಿತು. "Study Abroad" ಕಾರ್ಯಕ್ರಮದಡಿ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಸಾಲದ ಸೌಲಭ್ಯಗಳ ಕುರಿತು ಮಹತ್ವದ ಚರ್ಚೆ ನಡೆಯಿತು.
ವಿದ್ಯಾರ್ಥಿಗಳ ಜಾಗತಿಕ ಶಿಕ್ಷಣದ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವ ವಿಚಾರದ ಕುರಿತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ ಅವರು ಮಾತನಾಡಿದರು.
ಯುವಜನರಲ್ಲಿ ಜಾಗತಿಕ ಮಟ್ಟದ ಉದ್ಯೋಗ ಸಾಮರ್ಥ್ಯವನ್ನು ವೃದ್ಧಿಸಲು ಅಗತ್ಯವಿರುವ ಕೌಶಲ್ಯ ತರಬೇತಿ, ವಿದೇಶಿ ಭಾಷಾ ಕಲಿಕೆ ಹಾಗೂ ಪ್ರಮಾಣಪತ್ರಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಸಮಾಲೋಚಿಸಲಾಯಿತು.
ಈ ಸಭೆಯಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ ಕೆ. ಫಾಹಿಂ ಅವರು, ಕೆ.ಎಸ್.ಡಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀಮತಿ ಸುಮತಿ ಬಿ.ಎಸ್, IMC-K ಸಹಾಯಕ ಪ್ರಧಾನ ವ್ಯವಸ್ಥಾಪಕರಾದ (AGM) ಶ್ರೀ ಅವಿನಾಶ್ ಅವರು ಹಾಗೂ ಉಭಯ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
21/05/2026
ದಿನಾಂಕ 21.05.2026 ರಂದು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ (National Skill Development Corporation – NSDC) ಪ್ರತಿನಿಧಿಗಳ ತಂಡದ ಮುಖ್ಯಸ್ಥರಾದ ಶ್ರೀ ಸುನಿಲ್ ಕುಮಾರ್ ಅವರ ನೇತೃತ್ವದ ತಂಡವು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ ಅವರನ್ನು ಭೇಟಿ ಮಾಡಿ IMCK ಸಂಬಂಧಿತ ಹಲವು ಪ್ರಮುಖ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿತು.
ಸಭೆಯಲ್ಲಿ ರಾಜ್ಯದ ಯುವಕರಿಗೆ ಉದ್ಯೋಗೋದ್ಯಮ ಆಧಾರಿತ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ಉದ್ಯೋಗಮುಖಿಯಾಗಿ ರೂಪಿಸುವ ಕುರಿತು ವಿಸ್ತೃತ ಚರ್ಚೆ ನಡೆಯಿತು. ಕೈಗಾರಿಕೆಗಳ ಅವಶ್ಯಕತೆಗಳಿಗೆ ಅನುಗುಣವಾಗಿ ತರಬೇತಿ ಕೋರ್ಸ್‌ಗಳನ್ನು ರೂಪಿಸುವುದು, ಉದ್ಯೋಗ ಸಂಪರ್ಕಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಬಲಪಡಿಸುವುದು, ಡಿಜಿಟಲ್ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಜನತೆಗೆ ಸಮಾನವಾಗಿ ತಲುಪಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.
IMCK ಯೋಜನೆಯಡಿ ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವುದು, ತರಬೇತಿ ಕೇಂದ್ರಗಳ ಗುಣಮಟ್ಟ ಮತ್ತು ಸಾಮರ್ಥ್ಯ ವೃದ್ಧಿ, ಕೈಗಾರಿಕಾ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೆಚ್ಚಿಸುವುದು ಹಾಗೂ ಅಂತರರಾಷ್ಟ್ರೀಯ ಮಟ್ಟದ ತರಬೇತಿ ಮತ್ತು ಪ್ರಮಾಣಪತ್ರ ವ್ಯವಸ್ಥೆಗಳನ್ನು ಪರಿಚಯಿಸುವ ಕುರಿತು ಸಭೆಯಲ್ಲಿ ವಿಶೇಷ ಗಮನ ಹರಿಸಲಾಯಿತು. ಜೊತೆಗೆ ಯುವಕರಿಗೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ದಿಸೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಹ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ ಅವರು ಕರ್ನಾಟಕ ಸರ್ಕಾರವು ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ನೀಡುತ್ತಿರುವ ಮಹತ್ವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ರಾಜ್ಯದ ಯುವಜನತೆಗೆ ನೀಡಲಾಗುತ್ತಿರುವ ವಿವಿಧ ತರಬೇತಿ ಕಾರ್ಯಕ್ರಮಗಳು, ಸ್ವಯಂ ಉದ್ಯೋಗ ಉತ್ತೇಜನ ಯೋಜನೆಗಳು ಹಾಗೂ ಕೈಗಾರಿಕಾ ಬೇಡಿಕೆಗಳಿಗೆ ಅನುಗುಣವಾದ ಮಾನವ ಸಂಪನ್ಮೂಲ ನಿರ್ಮಾಣ ಕಾರ್ಯಗಳ ಕುರಿತು ವಿವರಿಸಿದರು. ರಾಜ್ಯದ ಯುವಜನತೆಗೆ ಗುಣಮಟ್ಟದ ಹಾಗೂ ಜಾಗತಿಕ ಮಟ್ಟದ ಕೌಶಲ್ಯ ತರಬೇತಿಯನ್ನು ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
NSDC ತಂಡದ ಮುಖ್ಯಸ್ಥರಾದ ಶ್ರೀ ಸುನಿಲ್ ಕುಮಾರ್ ಅವರು ಕರ್ನಾಟಕ ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ನಡೆಯುತ್ತಿರುವ ಯೋಜನೆಗಳು ಮತ್ತು ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದೊಂದಿಗೆ ಸಮನ್ವಯ ಸಾಧಿಸಿ ವಿವಿಧ ನವೀನ ಯೋಜನೆಗಳನ್ನು ಜಾರಿಗೆ ತರುವುದಾಗಿ ಹಾಗೂ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಉಭಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಭವಿಷ್ಯದ ಸಹಯೋಗ, ತರಬೇತಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಕೈಗಾರಿಕಾ ಸಹಭಾಗಿತ್ವ, ತಾಂತ್ರಿಕ ಶಿಕ್ಷಣ ವಿಸ್ತರಣೆ ಹಾಗೂ ಯುವಕರ ಸಬಲೀಕರಣ ಕುರಿತಂತೆ
ಈ ಉದ್ಯೋಗ ಮೇಳವು ನಿರುದ್ಯೋಗಿ ಯುವಜನತೆಗೆ ಹೊಸ ಆಶಾಕಿರಣವಾಗಿದ್ದು, ಅವರ ಜೀವನಕ್ಕೊಂದು ಭರವಸೆಯ ದಾರಿ ದೀಪವಾಗಿದೆ. ಇಲ್ಲಿ ಕೇವಲ ಕೆಲಸ ನೀಡುವುದಷ್ಟೇ ಅಲ್ಲದೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ನಾವೇ 4 ತಿಂಗಳ ಉಚಿತ ತರಬೇತಿಯನ್ನು (Training) ನೀಡಿ, ಅವರ ಕೌಶಲ್ಯವನ್ನು ವೃದ್ಧಿಸಿ ನಂತರ ಉದ್ಯೋಗಾವಕಾಶ ಕಲ್ಪಿಸಿಕೊಡಲಿದ್ದೇವೆ.
19/05/2026
ದಾದಿಯರಿಗಾಗಿ (Nurses) ಉಚಿತ ಜಪಾನಿ ಭಾಷಾ ಕೋರ್ಸ್
ಈಗಲೇ ನೋಂದಾಯಿಸಿ !
ಈ ಲಿಂಕ್ ಕ್ಲಿಕ್ ಮಾಡಿ: https://ethnus.link/ksdc-jlte
18/05/2026
ಇಂದು ದಿನಾಂಕ 18.05.2026 ರಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ಕಚೇರಿಗೆ ಚೈಲ್ಡ್ ಫಂಡ್ (ChildFund) ಕಾರ್ಯನಿರ್ವಾಹಕ ನಿರ್ದೇಶಕರಾದ ಆನಂದ್ ವಿಷ್ಣು ಅವರು ಹಾಗೂ ಹಿರಿಯ ತಜ್ಞರಾದ ಮಂಜುನಾಥ್ ಅವರು ಆಗಮಿಸಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ್ ಅವರನ್ನು ಭೇಟಿಯಾದರು.
ಕರ್ನಾಟಕ ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಯುವಜನರಿಗೆ ಉದ್ಯೋಗಮುಖಿ ತರಬೇತಿಗಳನ್ನು ವಿಸ್ತರಿಸುವುದು, ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಯುವಕರಿಗೆ ಕೌಶಲ್ಯ ತರಬೇತಿ ಅವಕಾಶಗಳನ್ನು ಹೆಚ್ಚಿಸುವುದು ಹಾಗೂ KSDC ವತಿಯಿಂದ ಜಾರಿಗೊಳ್ಳಬಹುದಾದ ವಿಶೇಷ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಇದೇ ವೇಳೆ, ChildFund India ಸಂಸ್ಥೆಯ ಸಹಯೋಗದೊಂದಿಗೆ ಕೈಗೊಳ್ಳಬಹುದಾದ ವಿವಿಧ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು, ಮಹಿಳಾ ಸಬಲೀಕರಣ, ಯುವಜನರ ಉದ್ಯೋಗಾವಕಾಶಗಳು, ಜೀವನೋಪಾಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಸಮಾಜಮುಖಿ ಯೋಜನೆಗಳ ಕುರಿತು ವಿಸ್ತೃತವಾಗಿ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.
ಮಾನ್ಯ ಅಧ್ಯಕ್ಷರು ಕರ್ನಾಟಕದ ಯುವಕರ ಅಭಿವೃದ್ಧಿಗಾಗಿ ಹೊಸ ಯೋಜನೆಗಳನ್ನು ರೂಪಿಸುವ ಅಗತ್ಯತೆಯನ್ನು ಒತ್ತಿ ಹೇಳಿ, ಸರ್ಕಾರದ ವಿವಿಧ ಯೋಜನೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಧಿಕಾರಿಗಳು ಕೌಶಲ್ಯಾಭಿವೃದ್ಧಿ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಉದ್ಯೋಗ ಮೇಳಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡು ಬಂದಿದ್ದೇವೆ. ಉದ್ಯೋಗ ಮೇಳದಿಂದ ಹೊಸ ಭರವಸೆ ಮೂಡಿದೆ.
Click here to claim your Sponsored Listing.
Location
Category
Contact the business
Website
Address
Dairy Circle, Hombegowda Nagar, Kaushalya Bhavan
Bangalore
560029
