27/05/2026
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ.
ಈ ಯೋಜನೆಯಡಿ ರಾಜ್ಯದ ಒಟ್ಟು 1.64 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈವರೆಗೆ ಯೋಜನೆಗಾಗಿ ₹26,115 ಕೋಟಿ ಅನುದಾನವನ್ನು ವ್ಯಯಿಸಲಾಗಿದೆ.
27/05/2026
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ಯುವನಿಧಿ ಯೋಜನೆಯ ಮೂಲಕ ಭವಿಷ್ಯದ ಭರವಸೆ ಹೊತ್ತ ಕೈಗಳಿಗೆ ಆರ್ಥಿಕ ಬೆಂಬಲ ಒದಗಿಸಿದ್ದೇವೆ.
ಈವರೆಗೆ 3.38 ಲಕ್ಷ ಅರ್ಹ ಫಲಾನುಭವಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗಿದ್ದು, ಇದಕ್ಕಾಗಿ ₹950 ಕೋಟಿ ವ್ಯಯಿಸಲಾಗಿದೆ.
27/05/2026
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದ ಹಳ್ಳಕ್ಕೆ ತಡೆಗೋಡೆಯನ್ನು ನಿರ್ಮಾಣ ಮಾಡುವಂತೆ ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗವನ್ನು ಕೋರಿರುತ್ತಾರೆ.
ಅದರಂತೆ ಪರಿಶೀಲಿಸಿದಾಗ, ಸದರಿ ತಡೆಗೋಡೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಕಾಮಗಾರಿಗೆ 2024-25ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ₹5 ಲಕ್ಷ ಅನುಮೋದನೆಗೊಂಡಿದ್ದು, ಆದಷ್ಟು ಶೀಘ್ರ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದೆಂದು ಯಾದಗಿರಿ ಜಿಲ್ಲೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
27/05/2026
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಕುಡಿಯುವ ನೀರಿನ ಗುಣಮಟ್ಟ ಹದಗೆಟ್ಟಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ರಾರಾವಿಯಲ್ಲಿರುವ ಪೈಪ್‌ಲೈನ್‌ನಲ್ಲಿರುವ ಲಾರ್ವಾಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಒಳಗೋಡೆಯಲ್ಲಿರುವ ಜೈವಿಕ ಪದರಗಳನ್ನು ಕರಗಿಸಲು ಎರಡು ಸಾಲುಗಳ Gravity Mains ಪೈಪ್‌ಲೈನ್‌ಗಳನ್ನು ಶಾಕ್ ಕ್ಲೋರಿನೀಕರಣ ಮತ್ತು ಫ್ಲಷಿಂಗ್ ಪ್ರಕ್ರಿಯೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಮುಖ್ಯಪೈಪ್‌ಲೈನ್‌ಗಳನ್ನು ಸಂಪೂರ್ಣವಾಗಿ ಸೋಂಕುರಹಿತಗೊಳಿಸಿ ರಾರಾವಿ ಗ್ರಾಮಕ್ಕೆ ಆದಷ್ಟು ಶೀಘ್ರವಾಗಿ ಶುದ್ಧ ಕುಡಿಯುವ ನೀರನ್ನು ಮರುಸರಬರಾಜು ಮಾಡಲಾಗುವುದೆಂದು ಸಿರಗುಪ್ಪ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
27/05/2026
ಮಾನವ - ಆನೆ ಸಂಘರ್ಷ ತಗ್ಗಿಸಲು 2,000 ಹೆಕ್ಟೇರ್ ಪ್ರದೇಶದಲ್ಲಿ ಆನೆಧಾಮ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದ್ದು, 8 - 10 ದಿನದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
27/05/2026
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ.
ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ.
27/05/2026
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕೇಸರಜವಗಳಾ ಗ್ರಾಮದ ಅಂಗನವಾಡಿಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲದಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಕೇಸರಜವಗಳಾ ಗ್ರಾಮದ ಎ ಮತ್ತು ಬಿ ಅಂಗನವಾಡಿ ಕೇಂದ್ರವು ಮಳೆಯಿಂದ ಹಾಗೂ ಶೌಚಾಲಯಗಳು ಅಂಗನವಾಡಿಯಿಂದ ಹೊರಗಡೆ ಇರುವುದರಿಂದ ಸಾರ್ವಜನಿಕರು ಬಳಸಿ ಹಾಳಾಗಿರುತ್ತದೆ. ಸದರಿ ಅಂಗನವಾಡಿ ಕೇಂದ್ರಗಳನ್ನು ರಿಪೇರಿ ಮಾಡಲು 2026-27ನೇ ಸಾಲಿನ ತಾಲ್ಲೂಕು ಪಂಚಾಯತ್ ಲಿಂಕ್ ಡಾಕ್ಯೂಮೆಂಟ್ ಅನುದಾನದಲ್ಲಿ ಶೌಚಾಲಯವನ್ನು ಸರಿಪಡಿಸಿ ಕ್ರಮ ಜರುಗಿಸಲಾಗುವುದು. ಹಾಗೂ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಸೌಲಭ್ಯ, ಫ್ಯಾನ್ ಸೌಲಭ್ಯ ಹಾಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಇರುವುದಾಗಿ ಭಾಲ್ಕಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
26/05/2026
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಹಾರನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಅಪರಿಚಿತ ವ್ಯಕ್ತಿಗಳು ರಾತ್ರಿ ವೇಳೆಯಲ್ಲಿ ಮಧ್ಯಪಾನ ಮಾಡಿ ಆವರಣದ ಸ್ವಚ್ಛತೆಯನ್ನು ಹಾಳುಮಾಡುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಮುಖ್ಯ ಶಿಕ್ಷಕರೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೂಕ್ತ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಪಿರಿಯಾಪಟ್ಟಣ ತಾಲ್ಲೂಕಿನ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
26/05/2026
Karnataka has taken a historic step towards dignity and prosperity for workers.
Our government has increased minimum wages by up to 60% across 81 sectors, ensuring better livelihoods for lakhs of organised and unorganised workers.
✔ ₹23,376 minimum monthly wage for unskilled workers in Bengaluru
✔ Up to ₹31,114 for highly skilled workers
✔ Gender disparity in wage structures removed
We believe economic growth must empower every hardworking citizen and strengthen social justice.
ಶ್ರಮಕ್ಕೆ ಗೌರವ • ಬದುಕಿಗೆ ಭದ್ರತೆ