22/07/2026
ಬಂಟ್ವಾಳ ತಾಲೂಕಿನ ಬರಿಮಾರ್ ಕಲ್ಲೆಟ್ಟಿಯಲ್ಲಿ ಸಂಭವಿಸಿದ ದುರಂತ ಮನಕಲಕುವಂತದ್ದು.
ಶಾಲಾ ಬಸ್ ಮೇಲೆ ಮರ ಬಿದ್ದು ಅಮಾಯಕ ಬಾಲಕಿ ಜೀವ ಕಳೆದುಕೊಂಡಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಹಾರೈಸುತ್ತೇನೆ.
ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲಾ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿನಂತಿಸುತ್ತೇನೆ.
ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಶಾಲಾ ವಾಹನಗಳ ಸುರಕ್ಷತೆ ಹಾಗೂ ರಸ್ತೆ ಬದಿಯ ಅಪಾಯಕಾರಿ ಮರಗಳ ಕುರಿತು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವುದು ಅತ್ಯವಶ್ಯಕ.
ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕಿಗೆ ನನ್ನ ಭಾವಪೂರ್ಣ ನಮನಗಳು.