02/10/2025
ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು.
ತಾಯಿ ಚಾಮುಂಡೇಶ್ವರಿ ದೇವಿಯು ಸರ್ವರಿಗೂ ಸನ್ಮಂಗಳವನ್ನುಂಟುಮಾಡಲಿ.
bjp
02/10/2025
ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು.
ತಾಯಿ ಚಾಮುಂಡೇಶ್ವರಿ ದೇವಿಯು ಸರ್ವರಿಗೂ ಸನ್ಮಂಗಳವನ್ನುಂಟುಮಾಡಲಿ.
ಸಮಸ್ತ ಸ್ವಯಂ ಸೇವಕ ಸಂಘದ ಸಮಸ್ತ ಕಾರ್ಯಕರ್ತರಿಗೆ ಸಂಘದ 100 ನೇ ವರ್ಷದ ಸಂಭ್ರಮೋತ್ಸವದ ಹಾರ್ದಿಕ ಶುಭಾಶಯಗಳು.
ದೇಶ, ಧರ್ಮ ಹಾಗೂ ಸಮಾಜಕ್ಕಾಗಿ ಆರಂಭವಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 2025ರ ಈ ವಿಜಯದಶಮಿಯಂದು 100 ವರ್ಷ ತುಂಬಲಿದೆ. ಆ ಹಿನ್ನೆಲೆಯಲ್ಲಿ ಎಲ್ಲಾ ಸ್ವಯಂ ಸೇವಕರು ಈ ದಿನವನ್ನು ಮಂಡಲ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗಣವೇಶ ಧರಿಸಿ ಅತ್ಯಂತ ಸಂಭ್ರಮದಿಂದ ಆಚರಿಸಬೇಕೆಂದು ಕೋರುತ್ತೇನೆ.
24/09/2025
20/09/2025
ವಿಶ್ವ ನಾಯಕ, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ 75ನೇ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕ ಅಭಿಯಾನ ಭಾಗವಾಗಿ ಬೇಲೂರು ಮಂಡಲ ಭಾಜಪದ ವತಿಯಿಂದ ಅರೇಹಳ್ಳಿಯಲ್ಲಿ ಇದೇ ಸೆಪ್ಟೆಂಬರ್ 22ರ ಸೋಮವಾರದಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಹೆಚ್.ಕೆ ಸುರೇಶ್ ಅವರು ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ತಾವೆಲ್ಲರೂ ಈ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು, ರಕ್ತದಾನದ ಮೂಲಕ ಜೀವ ಉಳಿಸುವ ಕೆಲಸ ಮಾಡಬೇಕೆಂದು ಕೋರುತ್ತೇವೆ.
17/09/2025
ದೇಶದ ಪ್ರಧಾನ ಸೇವಕರು, ಕಾಯಕ ಯೋಗಿ, ನಮ್ಮೆಲ್ಲರ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜೀ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.
15/09/2025
ಬೇಲೂರು ವಿಧಾನಸಭಾ ಕ್ಷೇತ್ರದ ಕೊತ್ತನಹಳ್ಳಿ ಗ್ರಾಮದಲ್ಲಿ ಇಂದು ಅರಣ್ಯ ಇಲಾಖೆ ಮತ್ತು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ರೈತರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಚರ್ಚಿಸಲಾಯಿತು.
ಬಿಕ್ಕೋಡು ಹೋಬಳಿಯ ಸುತ್ತ ಮುತ್ತ ಗ್ರಾಮಗಳಲ್ಲಿ ಕಳೆದ ತಿಂಗಳಿನಿಂದ ಅನೇಕ ಕಾಡಾನೆಗಳು ಬೀಡುಬಿಟ್ಟು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು. ಹಾಗೆಯೇ, ಹೆಚ್ಚಿನ ಪರಿಹಾರ ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ತೆಗೆದುಕೊಳ್ಳಲಾಯಿತು.
ಕಳೆದ ಗುರುವಾರ ಮಾನ್ಯ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆಯವನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮನವಿ ಮಾಡಿದ್ದರಿಂದ, ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿ ಅರಣ್ಯ ಪ್ರದೇಶದಲ್ಲಿ ಆನೆಧಾಮ ನಿರ್ಮಾಣ ಮಾಡಲು 1.5 ಕೋಟಿ ಅನುದಾನ ಬಿಡುಗಡೆ ಮಾಡಿರುವುದನ್ನು ಸ್ವಾಗತಿಸುತ್ತೇನೆ.
15/08/2025
ಬೇಲೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿಂದು ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಹಿರಿಯರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ದೊರೆತ ಸ್ವಾತಂತ್ರವನ್ನು ಬಳಸಿಕೊಂಡು, ದೇಶದ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ. ನಮ್ಮ ಕರ್ತವ್ಯಗಳನ್ನು ತಪ್ಪದೇ ನಿರ್ವಹಿಸೋಣ. ಈ ಸ್ವಾತಂತ್ರ್ಯವು ಸಮಾನತೆ ಹಾಗೂ ಸಹೋದರತ್ವದ ಭಾವನೆ ಗಟ್ಟಿಗೊಳಿಸಲಿ ಎಂದು ತಿಳಿಸಲಾಯಿತು.