AIDSO Hassan

Call Directions

AIDSO Hassan Unite struggle Unite

21/09/2026
ಆಲ್ ಇಂಡಿಯಾ ಡೆಮಾಕ್ರೆಟಿಕ್  ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಾಸನ ಜಿಲ್ಲಾ ಕೌನ್ಸಿಲ್,ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಮೆಡಿಕಲ್ ...
20/09/2026

ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಾಸನ ಜಿಲ್ಲಾ ಕೌನ್ಸಿಲ್,
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಮೆಡಿಕಲ್ ಸರ್ವಿಸ್ ಸೆಂಟರ್ (MSC) ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರ.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಲಿಂಗ್ಲಾಪುರ–ಸಿದ್ದರಹಟ್ಟಿ–ಬಕ್ಕಪ್ಪನಕೊಪ್ಪಲು, AIDSO ವಿದ್ಯಾರ್ಥಿ ಸಂಘಟನೆ ಹಾಗೂ ಮೆಡಿಕಲ್ ಸರ್ವಿಸ್ ಸೆಂಟರ್‌ನ ನೇತೃತ್ವದಲ್ಲಿ, ಹಾಸನ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸಹಕಾರದೊಂದಿಗೆ ಇಂದು ಲಿಂಗ್ಲಾಪುರ–ಸಿದ್ದರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು AIDSO ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೆಡಿಕಲ್ ಸರ್ವಿಸ್ ಸೆಂಟರ್‌ನ ರಾಜ್ಯ ಉಪಾಧ್ಯಕ್ಷರಾದ ಡಾ. ಗಂಗಾಧರ್, "ಕೆಲವೇ ಕೆಲವು ಮಂದಿಯಿಂದ ಆರಂಭವಾದ ಮೆಡಿಕಲ್ ಸರ್ವಿಸ್ ಸೆಂಟರ್ ಇಂದು ದೇಶದ ವಿವಿಧ ಭಾಗಗಳಲ್ಲಿ ಜನರ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಕಳೆದರೂ ಇಂದಿಗೂ ಅನೇಕ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿಂದ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ" ಎಂದು ಹೇಳಿದರು.

"ಜನರಿಗೆ ಆರೋಗ್ಯದ ಅರಿವಿನ ಜೊತೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಆರೋಗ್ಯ ಸೌಲಭ್ಯಗಳು ದೊರೆಯಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಆಸ್ಪತ್ರೆಗಳನ್ನು ಸ್ಥಾಪಿಸಿ, ಅವುಗಳಿಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು (ನರ್ಸ್‌ಗಳು), ತಪಾಸಣಾ ಉಪಕರಣಗಳು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು. ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡುವ ಬದಲು ಖಾಯಂ ಸಿಬ್ಬಂದಿಯನ್ನು ನೇಮಕ ಮಾಡಬೇಕು" ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

"ಇಂದಿಗೂ ಅನೇಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಹಾಗೂ ಗರ್ಭಿಣಿಯರಿಗೆ ಅಗತ್ಯವಾದ ಪೌಷ್ಟಿಕಾಂಶ ದೊರೆಯದ ಪರಿಸ್ಥಿತಿ ಇದೆ. ಆದ್ದರಿಂದ ಸರ್ಕಾರವು ಅಗತ್ಯವಿರುವ ಎಲ್ಲಾ ಆರೋಗ್ಯ ಮತ್ತು ಪೌಷ್ಟಿಕಾಂಶದ ಸೌಲಭ್ಯಗಳನ್ನು ಜನರಿಗೆ ಒದಗಿಸಬೇಕು" ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

ನೇತ್ರ ಚಿಕಿತ್ಸಕ ತಜ್ಞರಾದ ಡಾ. ವಸುಧೇಂದ್ರ ಅವರು ಉಚಿತ ವೈದ್ಯಕೀಯ ಶಿಬಿರ ಹಾಗೂ ಕಣ್ಣಿನ ಆರೋಗ್ಯದ ತಿಳುವಳಿಕೆಯ ಬಗ್ಗೆ ಮಾತನಾಡಿದರು. ಸ್ತ್ರೀರೋಗ ತಜ್ಞರಾದ ಡಾ. ಯಶ್ವಿತಾ ಅವರು ಹೆಣ್ಣುಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದರು. ಶಿಬಿರದಲ್ಲಿ ನೇತ್ರ ಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಸ್ತ್ರೀರೋಗ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಾಯಿತು. ಹತ್ತಕ್ಕೂ ಹೆಚ್ಚು ವೈದ್ಯರು ಗ್ರಾಮಸ್ಥರಿಗೆ ಉಚಿತವಾಗಿ ತಪಾಸಣೆ ಹಾಗೂ ಚಿಕಿತ್ಸೆಯನ್ನು ನೀಡಿದರು. ಲಿಂಗ್ಲಾಪುರ, ಸಿದ್ದರಹಟ್ಟಿ, ಬಕ್ಕಪ್ಪನಕೊಪ್ಪಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಶಿಬಿರದಲ್ಲಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಪಡೆದುಕೊಂಡರು.
ವೈದ್ಯಕೀಯ ಶಿಬಿರದಲ್ಲಿ MSCಯ ರಾಜ್ಯ ಖಜಾಂಚಿ ಡಾ. ರಾಜಶೇಖರ್ ಹಾಗೂ ರಾಜ್ಯ ಕಾರ್ಯದರ್ಶಿ ಡಾ. ವಸುಧೇಂದ್ರ ಉಪಸ್ಥಿತರಿದ್ದರು. ಹಾಸನ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿಭಾಗದಿಂದ ಡಾ. ಅಕ್ಷಯ್ ಎಸ್.ಆರ್., ಡಾ. ಪ್ರಜ್ವಲ್, ಡಾ. ಅರಾನ್ ಹಾಗೂ ಡಾ. ಉದಯ್; ನೇತ್ರ ಚಿಕಿತ್ಸಾ ವಿಭಾಗದಿಂದ ಡಾ. ವಿಭಾ; ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಿಂದ ಡಾ. ಯಶ್ವಿತಾ, ಡಾ. ಶಶಾಂಕ್ ಕೆ. ಹಾಗೂ ಡಾ. ಸಂಜಯ್; ಮಕ್ಕಳ ವಿಭಾಗದಿಂದ ಡಾ. ಪೂಜಾ ಹಾಗೂ ಡಾ. ಪ್ರಿಯಾಲ್ ಅವರು ಭಾಗವಹಿಸಿ ಚಿಕಿತ್ಸೆ ನೀಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರಾದ ಗಿರೀಶ್, ಅಪ್ಪು, ಶಶಿಕುಮಾರ್, ದೇವರಾಜ್, AIDSO ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಜಿಲ್ಲಾ ಅಧ್ಯಕ್ಷರಾದ ಚೈತ್ರಾ, ಜಿಲ್ಲಾ ಕಾರ್ಯದರ್ಶಿ ಸುಷ್ಮಾ, ಉಪಾಧ್ಯಕ್ಷರಾದ ಅಭಿಷೇಕ್ ಹಾಗೂ ಪದಾಧಿಕಾರಿಗಳಾದ ಪುರುಷೋತ್ತಮ್, ಧನು, ಶ್ರೇಷ್ಠ, ಶಿವು ಮತ್ತು ಪ್ರಾರ್ಥನಾ ಸೇರಿದಂತೆ ಗ್ರಾಮಸ್ಥರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



#ಅರಸೀಕೆರೆ

ಹಾಸನದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಅಪೂರ್ವ ಬಿಲ್ಡಿಂಗ್ ನಲ್ಲಿರುವ ಅಂಬೇಡ್ಕರ್ ವಿದ್ಯಾರ್ಥಿ ನಿಲಯಕ್ಕೆ ಮೂಲ ಸೌಲಭ್ಯಗಳನ್ನು ಆಗ್ರಹಿಸಿ ...
13/09/2026

ಹಾಸನದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಅಪೂರ್ವ ಬಿಲ್ಡಿಂಗ್ ನಲ್ಲಿರುವ ಅಂಬೇಡ್ಕರ್ ವಿದ್ಯಾರ್ಥಿ ನಿಲಯಕ್ಕೆ ಮೂಲ ಸೌಲಭ್ಯಗಳನ್ನು ಆಗ್ರಹಿಸಿ ನಡೆದ ಸತತ ಹೋರಾಟಕ್ಕೆ ಜಯ ಸಿಕ್ಕಿದೆ!!

ಇದು ವಿದ್ಯಾರ್ಥಿಗಳ ಐಕ್ಯ ಹಾಗೂ ಒಗ್ಗಟ್ಟಿನ ಹೋರಾಟಕ್ಕೆ ಸಂದ ಜಯ!!




13/09/2026

ಭಗತ್ ಸಿಂಗ್ ಅವರ ಪ್ರಕಾರ ಇಂಕ್ವಿಲಾಬ್ ಎಂದರೆ ಕೇವಲ ಘೋಷಣೆಯಲ್ಲ, ಸಮಾಜದ ಮೂಲಭೂತ ಬದಲಾವಣೆ ಮತ್ತು ಶೋಷಣೆಯ ವಿರುದ್ಧದ ಹೋರಾಟ!

ಇಂಕ್ವಿಲಾಬ್ ಜಿಂದಾಬಾದ್, ಕ್ರಾಂತಿ ಚಿರಾಯುವಾಗಲಿ!


08/09/2026

ಪ್ರತಿಭಟನೆ ನಮ್ಮ ಹಕ್ಕು!!
ನಮ್ಮ ಎಲ್ಲಾ ಸಮಸ್ಯೆಗಳಿಗೂ ಹೋರಾಟವೊಂದೇ ದಾರಿ!!
ಎಂದು ಹಾಸನದ ಅಂಬೇಡ್ಕರ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಎಲ್ಲರೂ ಅವರ ಮೂಲಭೂತ ಸೌಕರ್ಯಗಳನ್ನು ಆಗ್ರಹಿಸಿ ಧ್ವನಿ ಎತ್ತಿ ಹೋರಾಟ ಮಾಡಿ ಮಾದರಿಯಾಗಿದ್ದಾರೆ....!!
ಮೂರು ದಿನದ ಒಳಗಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತೇವೆಂದು ಅಧಿಕಾರಿಗಳು ಹೇಳಿದ್ದಾರೆ!!





07/09/2026

ಸಮಾಜದ ಎಲ್ಲಾ ಸಮಸ್ಯೆಗಳಿಗೂ ಒಗ್ಗಟ್ಟಿನ ಹೋರಾಟ ಒಂದೇ ದಾರಿ!!





Address

Hassan
573201

Telephone

+919164220387

Website

Alerts

Be the first to know and let us send you an email when AIDSO Hassan posts news and promotions. Your email address will not be used for any other purpose, and you can unsubscribe at any time.

Shortcuts

Share

Category