Bjp Basavan Bagewadi

Directions Contact the organization

Bjp Basavan Bagewadi Bjp4BasavanBagewadi

ಬಸವನ ಬಾಗೇವಾಡಿ ಪಟ್ಟಣದ ಪ್ರಸಿದ್ಧ ಮೂಲ ನಂದೀಶ್ವರರ ಐತಿಹಾಸಿಕ ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ನಂದೀಶ್ವ...
31/08/2026

ಬಸವನ ಬಾಗೇವಾಡಿ ಪಟ್ಟಣದ ಪ್ರಸಿದ್ಧ ಮೂಲ ನಂದೀಶ್ವರರ ಐತಿಹಾಸಿಕ ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ನಂದೀಶ್ವರನ ಭವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಆತ್ಮೀಯ ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಜೊತೆಯಲ್ಲಿದ್ದರು.

20/08/2026

ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನಗರದ ಡಾ. ಶ್ರೀ ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಬರ ಪರಿಹಾರ ನೀಡುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.

ಪ್ರಮುಖ ಬೇಡಿಕೆಗಳು:

• ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು.
• ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು.
• ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು.
• ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪಿಸಬೇಕು.
• ಕೆರೆ ತುಂಬುವ ಯೋಜನೆಯನ್ನು ಸಂಪೂರ್ಣಗೊಳಿಸಬೇಕು.
• ಜಿಲ್ಲೆಯ ಎಲ್ಲಾ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು.
• ಎಸ್‌ಸಿ–ಎಸ್‌ಟಿ ಅನುದಾನಗಳನ್ನು ಸಮರ್ಪಕವಾಗಿ ಬಳಸಬೇಕು.

ರೈತರ ಹಾಗೂ ಜನಸಾಮಾನ್ಯರ ನ್ಯಾಯಯುತ ಬೇಡಿಕೆಗಳ ಈ ಹೋರಾಟಕ್ಕೆ ಪಕ್ಷದ ಮುಖಂಡರು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Address

Kolhar

Website

Alerts

Be the first to know and let us send you an email when Bjp Basavan Bagewadi posts news and promotions. Your email address will not be used for any other purpose, and you can unsubscribe at any time.

Contact The Organization

Send a message to Bjp Basavan Bagewadi:

Shortcuts

Share