21/07/2026
ಕರ್ನಾಟಕ ಸರ್ಕಾರವು ಜನಸಾಮಾನ್ಯರ ಅನುಕೂಲಕ್ಕಾಗಿ ಮನೆ ಮನೆಗೆ ಉಚಿತ ಜಾತಿ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ಯೋಜನೆಗೆ ಚಾಲನೆ ನೀಡಿರುವುದು ಅತ್ಯಂತ ಜನಪರ ಹಾಗೂ ಶ್ಲಾಘನೀಯ ನಿರ್ಧಾರವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.
ಇದುವರೆಗೆ ಜಾತಿ ಹಾಗೂ ನಿವಾಸ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಹಲವು ಬಾರಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗುತ್ತಿತ್ತು. ಇದೀಗ ಸರ್ಕಾರವೇ ಮನೆ ಬಾಗಿಲಿಗೆ ಈ ಸೇವೆಯನ್ನು ತಲುಪಿಸುತ್ತಿರುವುದು ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮಹತ್ವದ ಹೆಜ್ಜೆಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು, ಹಿರಿಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ದುರ್ಬಲ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಈ ಯೋಜನೆಯಿಂದ ಸರ್ಕಾರಿ ಸೇವೆಗಳು ಇನ್ನಷ್ಟು ಪಾರದರ್ಶಕ ಹಾಗೂ ಸುಲಭವಾಗಿ ಲಭ್ಯವಾಗಲಿದ್ದು, ಜನರ ಸಮಯ ಮತ್ತು ಹಣ ಎರಡೂ ಉಳಿಯಲಿವೆ. ಜನಸ್ನೇಹಿ ಆಡಳಿತಕ್ಕೆ ಇದು ಉತ್ತಮ ಉದಾಹರಣೆಯಾಗಿದೆ.
ಆದ್ದರಿಂದ ರಾಜ್ಯದ ಎಲ್ಲಾ ನಾಗರಿಕರು ಸರ್ಕಾರದ ಈ ಯೋಜನೆಯ ಬಗ್ಗೆ ಅರಿವು ಹೊಂದಿ, ಮನೆ ಮನೆಗೆ ಉಚಿತ ಜಾತಿ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ.
ಜಾತಿ ಮತ್ತು ಆದಾಯ ದೃಢೀಕರಣ ಪತ್ರವನ್ನು ಸಾರ್ವಜನಿಕರು ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಲು ವಿಶೇಷ ವೆಬ್‌ಸೈಟ್ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ.
(https://nadakacheri.karnataka.gov.in/AJSKCertificates)
ರಕ್ಷಿತ್ ಶಿವರಾಂ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ
Indian National Congress - Karnataka DK Shivakumar Randeep Singh Surjewala Siddaramaiah B K Hariprasad Karnataka Pradesh Youth Congress UT Khader Satish Jarkiholi Raksh*th Shivaram Tulunad GC Chandrashekhar Dinesh Gundu Rao Raksh*th Shivaram Raksh*th Shivaram INC - Dakshina Kannada BelthangadyBlock Congress @