INC Mysore City

INC Mysore City

Share

The party which develops and consolidates the feelings of national unity irrespective of caste, religion or province.

Photos from INC Mysore City's post 01/06/2026

ಸಿದ್ದರಾಮಯ್ಯನವರ ನಡೆ ಪ್ರಸ್ತುತ ರಾಜಕಾರಣಕ್ಕೆ ಮಾದರಿ- ಕೆಪಿಸಿಸಿ ವಕ್ತಾರಾ ಎಚ್.ಎ. ವೆಂಕಟೇಶ್

01/06/2026

ಬೆಂಗಳೂರು, ಮೇ 31: ಮುಖ್ಯಮಂತ್ರಿ ಸ್ಥಾನವನ್ನು ಸುಗಮವಾಗಿ ಹಸ್ತಾಂತರಿಸುವ ಮೂಲಕ ಸಿದ್ದರಾಮಯ್ಯ ಅವರು ತಮ್ಮ ಮೇರು ವ್ಯಕ್ತಿತ್ವ ಮತ್ತು ಸೈದ್ಧಾಂತಿಕ ರಾಜಕಾರಣದ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ತಿಳಿಸಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮುನ್ನಡೆಸಿದ ಸಿದ್ದರಾಮಯ್ಯ ಅವರು ಬಡಜನರ ಆಶಾಕಿರಣವಾಗಿದ್ದು, ಜನಸೇವೆಗೆ ತಮ್ಮ ರಾಜಕೀಯ ಜೀವನವನ್ನು ಸಮರ್ಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಹಾಗೂ ಗ್ಯಾರಂಟಿ ಯೋಜನೆಗಳ ರೂಪುರೇಷೆಗಳಲ್ಲಿ ಡಾ.ಜಿ. ಪರಮೇಶ್ವರ್ ಅವರ ಪಾತ್ರ ಮಹತ್ವದ್ದಾಗಿದೆ ಎಂದು ವೆಂಕಟೇಶ್ ಶ್ಲಾಘಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಮತ್ತು ಡಾ.ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತವನ್ನು ಇನ್ನಷ್ಟು ಬಲಪಡಿಸಿ, ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸಲಿ ಎಂದು ಅವರು ಆಶಿಸಿದ್ದಾರೆ.
JustKannada Siddaramaiah Dr Yathindra Siddaramaiah Yaduveer Krishnadatta Chamaraja Wadiyar DK Shivakumar UT Khader

31/05/2026

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಇಂದಿನ ಫೈನಲ್ ಪಂದ್ಯಕ್ಕಾಗಿ ಹೃತ್ಪೂರ್ವಕ ಶುಭಾಶಯಗಳು - ಎಂ.ಕೆ. ಸೋಮಶೇಖರ್
ಮಾಜಿ ಶಾಸಕರು ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಮೈಸೂರು

Photos from INC Mysore City's post 30/05/2026

ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರಗತಿಪರ ಸಂಘಟನೆಗಳು ಆಯೋಜಿಸಿದ್ದ "ಎಸ್ ಐ ಆರ್" ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.ಈ ವೇಳೆ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

29/05/2026

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ

* ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ.

* ಮೇರು ನಟ ಡಾ.ರಾಜ್‌ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು". ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ.

* ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.

* ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.

* ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.

* ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.

* ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.

* ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.

* ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ

* ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.

* ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.

* ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.

* ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.

* ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.

* ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.

* ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.

* ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.

* ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.

* ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.

* ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್‌ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.

* ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.

* ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.

* ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

* ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ..

ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು

21/05/2026

ಕರ್ನಾಟಕ ರಾಜ್ಯದ ಸುಮಾರು 10 ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳ ನಿಯೋಗ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೈಸೂರು ಡಿಸಿಸಿ ಅಧ್ಯಕ್ಷರಾದ ಡಾ. ಬಿಜೆವಿ ಅವರಿಗೆ ಈ ಬಾರಿ MLC ಮಾಡಲು ಸರ್ವಾನುಮತದ ನಿರ್ಣಯ ಪತ್ರವನ್ನು ಸಲ್ಲಿಸಿದ್ದೇವೆ .

- ಶ್ರೀ ಆರ್ ಮೂರ್ತಿ,
- ಅಧ್ಯಕ್ಷರು - ಮೈಸೂರು ನಗರ ಕಾಂಗ್ರೆಸ್ ಸಮಿತಿ

19/05/2026

ಬಡವರ ಕೂಲಿಕಾರ್ಮಿಕರ ವಯೋವೃದ್ಧರ ಬದುಕಿಗೆ ಆಸರೆಯಾಗುವುದೇ ಪ್ರತಿಯೊಂದು ಸರ್ಕಾರದ ಮೂಲಕರ್ತವ್ಯ.ಪಕ್ಷ ಯಾವುದೇ ಇರಲಿ,ಸಮಾವೇಶ ಯಾವುದೇ ಆಗಲಿ ಆ ತಾಯಿಯ ಯೋಜನೆಗಳ ಬಗೆಗಿನ ಧನ್ಯತಾ ನುಡಿ ನಿಜಕ್ಕೂ ಸಾರ್ಥಕತೆಯ ಸಂಕೇತ ಎಂದರೇ ಅತಿಶಯೋಕ್ತಿಯಲ್ಲ.

Photos from INC Mysore City's post 18/05/2026

ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ರೈಲು ತಡೆದು ಪ್ರತಿಭಟನೆ ಕುರಿತು ಪತ್ರಿಕಾ ವರದಿಗಳು.

17/05/2026

ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ರೈಲು ತಡೆದು ಪ್ರತಿಭಟನೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಂ.ಕೆ ಸೋಮಶೇಖರ್ ರವರ ನೇತೃತ್ವದಲ್ಲಿ "ನೀಟ್ ಪರೀಕ್ಷೆ ಪತ್ರಿಕೆ ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ" ಕೇಂದ್ರ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆಯುವ ಮೂಲಕ ಪ್ರತಿಭಟನೆ ನೆಡೆಸಲಾಯಿತು.

ಪ್ರತಿಭಟನೆಯಲ್ಲಿ ಕೂಗಿದ ಘೋಷಣೆಗಳು.

22 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುಳ್ಳಾದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ.

89 ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ.

ಸಧೃಡ ಭಾರತವನ್ನು ಅವನತಿಗೆ ಕೊಂಡೊಯ್ಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ.

ಅಸಮರ್ಥ ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ.

ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು.

ತೊಲಗಲಿ ತೊಲಗಲಿ
ಕೇಂದ್ರ ಶಿಕ್ಷಣ ಸಚಿವ ಮಂತ್ರಿ ಪದವಿಯಿಂದ ತೊಲಗಲಿ.

NO TO
PAPER
LEAKS!

STOP
PLAYING WITH
THE LIVES OF STUDENTS

SACK
UNION
EDUCATION
MINISTER

END NEET
EXAM SCAM

NTA NEVER
TRUSTABLE
AGENCY

SHAME SHAME BJP GOVERNMENT

INCOMPETENT EDUCATION
MINISTER
DHARMENDR KUMAR

Want your business to be the top-listed Government Service in Mysore?

Click here to claim your Sponsored Listing.

Location

Website

Address

Mysore