Deputy Commissioner Raichur

Directions Website Contact the organization

Deputy Commissioner Raichur Deputy Commissioner Raichur

ರಾಯಚೂರು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ...
06/10/2026

ರಾಯಚೂರು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್., ರವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದೌರ್ಜನ್ಯ ಪ್ರಕರಣ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ನಿಯಂತ್ರಣ ಸಮಿತಿಗಳು ನಿಯಮಿತವಾಗಿ ಸಭೆ ನಡೆಸಿ, ದೌರ್ಜನ್ಯ ಪ್ರಕರಣಗಳು ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಬೇಕು. ಜಿಲ್ಲೆಯ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಗ್ರಾಮಗಳಲ್ಲಿ ಪ್ರತಿ ಬುಧವಾರ ಸಭೆ ನಡೆಸಿ, ವಿವಿಧ ಸಮುದಾಯಗಳ ನಡುವೆ ಸಾಮಾಜಿಕ ಸೌಹಾರ್ದತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಕಾರ್ಮಿಕತೆ, ಅಸ್ಪೃಶ್ಯತೆ ಆಚರಣೆ ಸೇರಿದಂತೆ ಯಾವುದೇ ಪ್ರಕರಣಗಳು ಅಥವಾ ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ಬಂದಲ್ಲಿ, ಸಂಬಂಧಿಸಿದ ಇಲಾಖೆಗಳೊಂದಿಗೆ ತಕ್ಷಣ ಸಮನ್ವಯ ಸಾಧಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಗ್ರಾಮಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಅರಿವು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಅದೇ ರೀತಿ, ಗ್ರಾಮಗಳಲ್ಲಿ ಅಂಗನವಾಡಿ, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಹಾನಿಯ ಕುರಿತು ಪರಿಶೀಲನೆ ನಡೆಸಲು ಭಾರತ ಸರ್ಕಾರದ ಅಧಿಕಾರಿಗಳ ಕೇಂದ್ರ ತಂಡವು ಜ...
04/10/2026

ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಹಾನಿಯ ಕುರಿತು ಪರಿಶೀಲನೆ ನಡೆಸಲು ಭಾರತ ಸರ್ಕಾರದ ಅಧಿಕಾರಿಗಳ ಕೇಂದ್ರ ತಂಡವು ಜಿಲ್ಲೆಗೆ ಭೇಟಿ ನೀಡಿ ವಿವಿಧ ಪ್ರದೇಶಗಳಲ್ಲಿ ಬರ ಸಮೀಕ್ಷೆ ನಡೆಸಿತು.

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಡಾ. ಮಾನಸಿಂಗ್ ಅವರ ನೇತೃತ್ವದಲ್ಲಿ ಭಾರತ ಸರ್ಕಾರದ ವೆಚ್ಚ ಇಲಾಖೆಯ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಕೇಶ್ ಕುಮಾರ್ ಅವರು ದೇವದುರ್ಗ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಜಿಲ್ಲೆಯ ಮಳೆಯ ಪ್ರಮಾಣ, ಬೆಳೆ ಹಾನಿ, ಕ್ರಾಪ್ ಕಟಿಂಗ್ ಫಲಿತಾಂಶ ಹಾಗೂ ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರದಿಂದ ಉಂಟಾಗಿರುವ ಹಾನಿಯ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು.

ನಂತರ ಕೇಂದ್ರ ತಂಡವು ಮಸರಕಲ್ ಹಾಗೂ ಎನ್. ಗಣೇಕಲ್ ಗ್ರಾಮಗಳ ಕೃಷಿ ಜಮೀನುಗಳಿಗೆ ಭೇಟಿ ನೀಡಿ, ಅನಾವೃಷ್ಟಿಯಿಂದ ಹಾನಿಗೊಳಗಾದ ಹತ್ತಿ ಹಾಗೂ ಮೆಣಸಿನಕಾಯಿ ಬೆಳೆಗಳನ್ನು ಸ್ಥಳದಲ್ಲೇ ಪರಿಶೀಲಿಸಿತು. ಈ ಸಂದರ್ಭದಲ್ಲಿ ರೈತರೊಂದಿಗೆ ಸಂವಾದ ನಡೆಸಿ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು.

ತಂಡವು ಗಣೇಕಲ್ ಜಲಾಶಯಕ್ಕೆ ಭೇಟಿ ನೀಡಿ, ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿತು. ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಉದ್ಯೋಗದ ಮೂಲಕ ದೊರೆಯುತ್ತಿರುವ ಪ್ರಯೋಜನಗಳು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು.

ಮಸರಕಲ್, ಎನ್. ಗಣೇಕಲ್, ಮಂದಕಲ್ ಹಾಗೂ ಯರಡೋಣ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಮತ್ತು ಬೆಳೆ ಹಾನಿಯನ್ನು ಪರಿಶೀಲಿಸಿದ ಕೇಂದ್ರ ತಂಡವು, ಸ್ಥಳ ಪರಿಶೀಲನೆಯ ವೇಳೆ ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿತು.

ಈ ಸಂದರ್ಭದಲ್ಲಿ ರಾಜ್ಯ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿಗಳಾದ ಗಿರೀಶ್ ಆರ್., ಜಿಲ್ಲಾಧಿಕಾರಿಗಳು ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ್ ಕಾಂದೂ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಡಳಿತ, ರಾಯಚೂರು ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿಯನ್ನು ನಗರದ ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿರುವ ಗಾ...
02/10/2026

ಜಿಲ್ಲಾಡಳಿತ, ರಾಯಚೂರು ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿಯನ್ನು ನಗರದ ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿರುವ ಗಾಂಧೀಜಿ ಅವರ ಪುತ್ಥಳಿ ಆವರಣದಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಕಟಿಸಲಾದ ‘ಗಾಂಧಿ ದರ್ಶನ ಜನಪದ’ ಹಾಗೂ ‘ಮಾರ್ಚ್ ಆಫ್ ಕರ್ನಾಟಕ’ ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಚ್ಛತೆ, ಸರಳತೆ ಮತ್ತು ಮಾನವೀಯ ಮೌಲ್ಯಗಳ ಆದರ್ಶಗಳನ್ನು ಸ್ಮರಿಸುತ್ತಾ, ಅವುಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದೊಂದಿಗೆ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ–2026ರನ್ನು ಮೆಕ್ಕಾ ದರ್ವಾಜ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋ...
30/09/2026

ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ–2026ರನ್ನು ಮೆಕ್ಕಾ ದರ್ವಾಜ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು, ಜಿಲ್ಲೆಯ ಪ್ರವಾಸಿ ತಾಣಗಳ ಸಂರಕ್ಷಣೆ, ಸ್ವಚ್ಛತೆ ಮತ್ತು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ 38 ಪ್ರವಾಸಿ ತಾಣಗಳಿಗೆ QR ಕೋಡ್ ಆಧಾರಿತ ಮಾಹಿತಿ ವ್ಯವಸ್ಥೆ ಕಲ್ಪಿಸುವ ಜೊತೆಗೆ, ಇಕೋ ಟೂರಿಸಂ ಹಾಗೂ ಜೀರೋ ವೇಸ್ಟ್ ಟ್ರೆಕ್ಕಿಂಗ್‌ಗೆ ಉತ್ತೇಜನ ನೀಡಲಾಗುತ್ತಿದೆ. ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ AI ಆಧಾರಿತ Customized Itinerary ವ್ಯವಸ್ಥೆಯನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ KSTDC ವತಿಯಿಂದ ತರಬೇತಿ ಪಡೆದ 20 ಪ್ರವಾಸಿ ಮಿತ್ರರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅಲ್ಲದೆ, 100 ವಿದ್ಯಾರ್ಥಿಗಳೊಂದಿಗೆ ಪಂಚ ಬೀಬಿ ಪ್ರವಾಸಿ ತಾಣಕ್ಕೆ ಟ್ರೆಕ್ಕಿಂಗ್ ಕಾರ್ಯಕ್ರಮ ಆಯೋಜಿಸಲಾಯಿತು.

ರಾಯಚೂರು ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ರವರ ಅಧ...
29/09/2026

ರಾಯಚೂರು ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ರವರ ಅಧ್ಯಕ್ಷತೆಯಲ್ಲಿ ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಅಕ್ಟೋಬರ್ ಮೊದಲ ವಾರದಲ್ಲಿ ಕೇಂದ್ರ ಬರ ಅಧ್ಯಯನ ತಂಡವು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 4ರಂದು ಬರಪೀಡಿತ ಎಂದು ಘೋಷಿಸಲಾದ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ಭೇಟಿ ನೀಡುವ ಸಾಧ್ಯತೆ ಹಿನ್ನೆಲೆಯಲ್ಲಿ, ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳು ಕೆಳಕಂಡಂತೆ ನಿರ್ದೇಶನ ನೀಡಿದರು:

ಜೋಳ ಖರೀದಿ ಕೇಂದ್ರಗಳಲ್ಲಿ ಬಾಕಿ ಇರುವ ರೈತರ ಮೊತ್ತವನ್ನು ಒಂದು ವಾರದೊಳಗೆ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಂದಾಯ, ಪೊಲೀಸ್ ಹಾಗೂ ಪಂಚಾಯತ್ ರಾಜ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕೊನೆಯ ಭಾಗದ ರೈತರಿಗೆ ನೀರು ತಲುಪುವಂತೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ವಿಭಾಗವಾರು ಕಾಲುವೆಯ ಹೂಳು ತೆಗೆಯುವ ಕಾಮಗಾರಿಗೆ ಅಗತ್ಯ ಅಂದಾಜುಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದರು.

ಕಾಲುವೆಯ ಸಮಸ್ಯೆಗಳ ಕುರಿತು ಕೆಬಿಜೆಎನ್‌ಎಲ್‌ನ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮಳೆ ಕೊರತೆಯಿಂದ ತೊಗರಿ, ಹತ್ತಿ, ಸಜ್ಜೆ ಹಾಗೂ ಸೂರ್ಯಕಾಂತಿ ಸೇರಿದಂತೆ ಹಾನಿಗೊಳಗಾದ ಬೆಳೆಗಳ ಕುರಿತು ಕಡ್ಡಾಯವಾಗಿ ಬೆಳೆ ಸಮೀಕ್ಷೆ ನಡೆಸಬೇಕು. ವೈಜ್ಞಾನಿಕವಾಗಿ ಬೆಳೆ ನಷ್ಟವನ್ನು ಅಂದಾಜಿಸಿ, ಅರ್ಹ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಭೂಮಿ ದಾಖಲೆ ಹೊಂದಿರುವ ಅರ್ಹ ರೈತರಿಗೆ ಬರ ಪರಿಹಾರ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ರಾಯಚೂರು ತಾಲೂಕಿಗೆ ಪ್ರತಿದಿನ 9ರಿಂದ 10 ಗಂಟೆಗಳ ಕಾಲ ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪಶುವೈದ್ಯರ ಖಾಲಿ ಹುದ್ದೆಗಳು ಸೇರಿದಂತೆ ಇಲಾಖೆಯಲ್ಲಿನ ಇತರೆ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮೇಲ್ಭಾಗ ಹಾಗೂ ಕೆಳಭಾಗದ ರೈತರು ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ಎದುರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ರಿಪೋರ್ಟರ್ಸ್ ಗಿಲ್ಡ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪತ್ರಕರ್ತ...
28/09/2026

ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ರಿಪೋರ್ಟರ್ಸ್ ಗಿಲ್ಡ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪತ್ರಕರ್ತರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿಗಳಾದ ಪೂವಿತಾ, ಎಸ್ ರವರು ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಉತ್ತಮ ಸಂವಹನ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ಕ್ರೀಡಾ ಚಟುವಟಿಕೆಗಳು ದೈಹಿಕ ಕ್ಷಮತೆ ಹಾಗೂ ಮಾನಸಿಕ ಉಲ್ಲಾಸಕ್ಕೆ ಪೂರಕವಾಗಿದ್ದು, ವೃತ್ತಿಪರ ಒತ್ತಡ ನಿವಾರಣೆಯಲ್ಲಿಯೂ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ. ವೆಂಕಟಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ್, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಗೌರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸರ್ಕಾರದ ಮಾರ್ಗಸೂಚಿಗಳು ಹಾಗೂ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟ...
21/09/2026

ಗೌರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸರ್ಕಾರದ ಮಾರ್ಗಸೂಚಿಗಳು ಹಾಗೂ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಗಜಾನನ ಮಂಡಳಿಗಳ ಪದಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಸರ್ಜನಾ ಮೆರವಣಿಗೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ತಿಳಿಸಿದರು.

ಟ್ರ್ಯಾಕ್ಟರ್‌ಗಳಿಗೆ ಅನುಭವಿ ಚಾಲಕರನ್ನು ನಿಯೋಜಿಸುವುದು, ಒಂದೇ ಟ್ರ್ಯಾಕ್ಟರ್‌ನಲ್ಲಿ ಒಂದಕ್ಕಿಂತ ಹೆಚ್ಚು ಗಣಪತಿ ಮೂರ್ತಿಗಳನ್ನು ಸಾಗಿಸದಿರುವುದು ಹಾಗೂ ಮೆರವಣಿಗೆ ಸಂದರ್ಭದಲ್ಲಿ ಯುವಕರು ಟ್ರ್ಯಾಕ್ಟರ್‌ಗಳ ಸುತ್ತಮುತ್ತ ಅಪಾಯಕಾರಿ ರೀತಿಯಲ್ಲಿ ಸಂಚರಿಸದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಮಕ್ಕಳ ಸುರಕ್ಷತೆಗೆ ವಿಶೇಷ ಗಮನ ನೀಡುವುದು, ಧ್ವನಿವರ್ಧಕ ಹಾಗೂ ಡಿಜೆ ಬಳಕೆಯಲ್ಲಿ ನಿಗದಿತ ಸಮಯ ಮತ್ತು ಶಬ್ದಮಾಲಿನ್ಯ ನಿಯಮಗಳನ್ನು ಪಾಲಿಸುವುದು ಹಾಗೂ ಸಾರ್ವಜನಿಕರು, ವೃದ್ಧರು, ರೋಗಿಗಳು ಮತ್ತು ಆಸ್ಪತ್ರೆಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಕಾಸಭಾವಿ ವಿಸರ್ಜನಾ ಸ್ಥಳದಲ್ಲಿ ಬ್ಯಾರಿಕೇಡ್‌ಗಳ ಒಳಭಾಗಕ್ಕೆ ಸಾರ್ವಜನಿಕರು ಪ್ರವೇಶಿಸದಂತೆ ಕಟ್ಟುನಿಟ್ಟಿನ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಪಾಲಿಕೆ ನಿಗದಿಪಡಿಸಿರುವ ಸುರಕ್ಷಿತ ವಿಧಾನದಲ್ಲಿಯೇ ವಿಸರ್ಜನೆ ನಡೆಸಬೇಕು. ರಾತ್ರಿ 11 ಗಂಟೆಯ ನಂತರ ಬ್ಯಾರಿಕೇಡ್ ದಾಟಿ ಯಾರೂ ಮುಂದೆ ತೆರಳದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇತ್ತೀಚೆಗೆ ಜಹೀರಾಬಾದ್‌ನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಬಾಲಕರಿಗೆ ಸಭೆಯಲ್ಲಿ ಒಂದು ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯ ಬಳಿಕ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮೃತ ಬಾಲಕರ ನಿವಾಸಕ್ಕೆ ತೆರಳಿ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗ...
20/09/2026

ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀಮತಿ ಪೂವಿತಾ ಎಸ್. ರವರು, ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ಜನರ ಮನೆಬಾಗಿಲಿಗೆ ಆಡಳಿತವನ್ನು ತಲುಪಿಸುವ ಉದ್ದೇಶದಿಂದ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಪ್ರತಿಯೊಂದು ಅಹವಾಲನ್ನು ಪರಿಶೀಲಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ವಿಲೇವಾರಿ ಮಾಡಲಾಗುವುದು. ಕೈಗೊಂಡ ಕ್ರಮದ ಮಾಹಿತಿಯನ್ನು ಅರ್ಜಿದಾರರಿಗೆ ಒದಗಿಸಲಾಗುವುದು ಎಂದು ತಿಳಿಸಿದರು.

ಲಿಂಗಸುಗೂರು ತಾಲೂಕಿನಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ಕಟಾವು ಪ್ರಯೋಗ ಸೇರಿದಂತೆ ಬರ ಪರಿಹಾರಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳನ್ನು ಇಲಾಖೆಗಳ ಸಮನ್ವಯದೊಂದಿಗೆ ಕೈಗೊಳ್ಳಲಾಗುತ್ತಿದೆ. ಅರಣ್ಯ, ಕಂದಾಯ, ಪಂಚಾಯತ್ ರಾಜ್, ಪೊಲೀಸ್, ಆರೋಗ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಮಟ್ಟದಲ್ಲಿ ನಿರ್ಧಾರ ಅಗತ್ಯವಿರುವ ವಿಷಯಗಳನ್ನು ಸಂಬಂಧಿಸಿದ ಉನ್ನತಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಮಾಹಿತಿ ಮಳಿಗೆಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಇಲಾಖೆಗಳ ಯೋಜನೆಗಳು ಮತ್ತು ಸೇವೆಗಳ ಕುರಿತು ಮಾಹಿತಿ ನೀಡಲಾಯಿತು.

ಕೃಷಿ ಇಲಾಖೆಯ ವತಿಯಿಂದ ಅರ್ಹ ರೈತರಿಗೆ ಕ್ರಿಮಿನಾಶಕ ಸಿಂಪಡಿಸುವ ಯಂತ್ರ, ಬಿತ್ತನೆ ಸಾಮಗ್ರಿಗಳು, ರೋಟರ್, ನೀರಿನ ಪೈಪ್ ಸೇರಿದಂತೆ ವಿವಿಧ ಕೃಷಿ ಸಲಕರಣೆಗಳನ್ನು ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಆಹಾರ, ಅಗ್ನಿಶಾಮಕ ದಳ, ಕೃಷಿ, ಅರಣ್ಯ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಆರೋಗ್ಯ, ತೋಟಗಾರಿಕೆ, ಖಜಾನೆ, ಅಬಕಾರಿ, ಕೆಕೆಆರ್‌ಟಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಪಶುಪಾಲನೆ, ರೇಷ್ಮೆ, ಸಮಾಜ ಕಲ್ಯಾಣ, ಯುವನಿಧಿ, ಉಪ ನೋಂದಣಿ, ಅಲ್ಪಸಂಖ್ಯಾತರ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಹಾಗೂ ಭೂಮಾಪನ ಸೇರಿದಂತೆ ವಿವಿಧ ಇಲಾಖೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.

ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್...
17/09/2026

ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾಮಾಜಿಕ ನ್ಯಾಯ, ರೈತರ ಹಿತರಕ್ಷಣೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಕಲ್ಯಾಣ ಕರ್ನಾಟಕವನ್ನು ರಾಜ್ಯದ ಮಾದರಿ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣ, ಆರೋಗ್ಯ, ಉದ್ಯೋಗ, ರಸ್ತೆ ಸಂಪರ್ಕ, ಅರಣ್ಯ ಹಾಗೂ ಆಡಳಿತ ಸುಧಾರಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ‘ಅಕ್ಷರ ಆವಿಷ್ಕಾರ’ ಯೋಜನೆಯಡಿ 2023ರಿಂದ 2026ರವರೆಗೆ ₹201 ಕೋಟಿಗೂ ಅಧಿಕ ಅನುದಾನ ಒದಗಿಸಲಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ 300 ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ, ಆರೋಗ್ಯ ಆವಿಷ್ಕಾರ ಯೋಜನೆ, ಉದ್ಯೋಗ ಆವಿಷ್ಕಾರ ಹಾಗೂ ಅರಣ್ಯ ಆವಿಷ್ಕಾರ ಯೋಜನೆಗಳ ಮೂಲಕ ವಿವಿಧ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

‘ಕಲ್ಯಾಣ ಪಥ’ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ವಿಧಾನಸಭಾ ಕ್ಷೇತ್ರಗಳಲ್ಲಿ ₹1,000 ಕೋಟಿ ವೆಚ್ಚದಲ್ಲಿ ಸುಮಾರು 1,150 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಪೊಲೀಸ್ ಹಾಗೂ ಇತರ ತುಕಡಿಗಳಿಂದ ಪಥಸಂಚಲನ ನಡೆಯಿತು. ಸಚಿವರು ಗೌರವ ವಂದನೆ ಸ್ವೀಕರಿಸಿದರು.

“ಪ್ರಜಾಪ್ರಭುತ್ವದ ನೈಜ ಶಕ್ತಿ ಕೇವಲ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳಲ್ಲ; ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿದೆ” ಎಂದು ಜಿಲ್ಲಾಧಿಕಾರಿಗಳಾದ ಶ್ರ...
16/09/2026

“ಪ್ರಜಾಪ್ರಭುತ್ವದ ನೈಜ ಶಕ್ತಿ ಕೇವಲ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳಲ್ಲ; ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿದೆ” ಎಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ಅವರು ಹೇಳಿದರು.

ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುವುದರ ಜೊತೆಗೆ, ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ನಾಗರಿಕರ ಜವಾಬ್ದಾರಿಗಳನ್ನೂ ಒತ್ತಿಹೇಳುತ್ತದೆ. ವಿದ್ಯಾರ್ಥಿಗಳು ಸಂವಿಧಾನ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತು, ಪ್ರಜಾಪ್ರಭುತ್ವದ ಆಶಯಗಳನ್ನು ತಮ್ಮ ಮನೆ-ಮನಗಳಿಗೆ ತಲುಪಿಸುವ ರಾಯಭಾರಿಗಳಾಗಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಸ್ವಚ್ಛತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆ ಕೇವಲ ಅಧಿಕಾರಿಗಳ ಹೊಣೆಗಾರಿಕೆಯಲ್ಲ; ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದರು.

ಶಾಲೆಗಳು, ವಸತಿ ನಿಲಯಗಳು ಮತ್ತು ಆಂಗನವಾಡಿಗಳಲ್ಲಿ ನೈರ್ಮಲ್ಯ ಹಾಗೂ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ **‘ನಿರ್ಮಲ ನಿಲಯ ಅಭಿಯಾನ’**ಕ್ಕೆ ಚಾಲನೆ ನೀಡಲಾಯಿತು. ಜೊತೆಗೆ ಯುವ ಸಂಸತ್ತು ಹಾಗೂ ನಿರ್ಮಲ ನಿಲಯ ಅಭಿಯಾನದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹೊಪಾತ್ರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಜೆ.ಎಸ್. ಪಾಟೀಲ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಭಾರತ ರತ್ನ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ನಂತರ ಭಾರತದ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯೋಣ — ಸಂವಿಧಾನದ ಮೌಲ್ಯಗಳನ್ನು ಪಾಲಿಸೋಣ.

Address

Deputy Commissioner
Raichur
584101

Alerts

Be the first to know and let us send you an email when Deputy Commissioner Raichur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Deputy Commissioner Raichur:

Shortcuts

Share