06/10/2026
ಸಂಘಟನ್ ಸೃಜನ ಅಭಿಯಾನ–2 ಪ್ರಕ್ರಿಯೆ ಕುರಿತು ಮಹತ್ವದ ಸಭೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂಘಟನ್ ಸೃಜನ ಅಭಿಯಾನ–2ರ ಸಂಘಟನಾ ಪ್ರಕ್ರಿಯೆ, ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನ, ಬ್ರಹ್ಮಗಿರಿಯಲ್ಲಿ ಮಹತ್ವದ ಸಭೆ ನಡೆಯಿತು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಕೊಳ್ಕೆಬೈಲು ಕಿಶನ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೆಪಿಸಿಸಿ ವತಿಯಿಂದ ಉಡುಪಿ ಜಿಲ್ಲೆಗೆ ಸಂಘಟನ್ ಸೃಜನ ಅಭಿಯಾನ–2ರ ಪ್ರಕ್ರಿಯೆಯ ವೀಕ್ಷಕರಾಗಿ ನಿಯೋಜಿಸಲ್ಪಟ್ಟಿರುವ ಶ್ರೀ ಐವನ್ ಡಿಸೋಜಾ, MLC ಹಾಗೂ ಉಪಾಧ್ಯಕ್ಷರು, KPCC, ಶ್ರೀ ಕಿಮ್ಮನೆ ರತ್ನಾಕರ್, ಮಾಜಿ ಸಚಿವರು, ಶ್ರೀ ಅಬ್ದುಲ್ ರವೂಫ್, ಕಾರ್ಪೊರೇಟರ್, ಮಂಗಳೂರು ಹಾಗೂ ಶ್ರೀಮತಿ ಶಲೇಟ್ ಪಿಂಟೋ, ಚೇರ್‌ಮನ್ ಅವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಸಂಘಟನಾ ಪ್ರಕ್ರಿಯೆಗಳ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು, ಕ್ಷೇತ್ರಗಳ ಮುಖಂಡರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘಟನ್ ಸೃಜನ ಅಭಿಯಾನ–2ರ ಸಂಘಟನಾ ಪ್ರಕ್ರಿಯೆ, ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಯಿತು.